Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನಿಗೆ ಕೂಗಿ ಬಿನ್ನೈಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:1
12 ತಿಳಿವುಗಳ ಹೋಲಿಕೆ  

ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.


ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.


ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು