Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 142:2 - ಕನ್ನಡ ಸಮಕಾಲಿಕ ಅನುವಾದ

2 ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಿಚ್ಚುವೆನು ಆತನ ಮುಂದೆ ಚಿಂತೆಯ ಕಟ್ಟನು I ಅರಿಕೆ ಮಾಡುವೆನು ನನ್ನ ಕಷ್ಟ ಸಂಕಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು; ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 142:2
10 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು