ಕೀರ್ತನೆಗಳು 144:14 - ಕನ್ನಡ ಸಮಕಾಲಿಕ ಅನುವಾದ14 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |