Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು? ನೀನು ಅವರನ್ನು ಯಾಕೆ ನೆನಸಬೇಕು? ಮನುಷ್ಯರು ಎಷ್ಟರವರು? ನೀನು ಅವರನ್ನು ಯಾಕೆ ಗಮನಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:3
7 ತಿಳಿವುಗಳ ಹೋಲಿಕೆ  

ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?


“ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.


ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?


“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು