Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:6 - ಕನ್ನಡ ಸಮಕಾಲಿಕ ಅನುವಾದ

6 ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು; ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು. ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:6
10 ತಿಳಿವುಗಳ ಹೋಲಿಕೆ  

“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು