Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:8 - ಕನ್ನಡ ಸಮಕಾಲಿಕ ಅನುವಾದ

8 ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಪಟವಚನದವರೂ ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಬಾಯಿ ಸುಳ್ಳುಗಳಿಂದ ತುಂಬಿವೆ. ಅವರ ಬಲಗೈ ಮೋಸದಿಂದ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:8
13 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.


ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.


ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ


ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.


ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು