Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:6 - ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:6
19 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು