ಕೀರ್ತನೆಗಳು 146:4 - ಕನ್ನಡ ಸಮಕಾಲಿಕ ಅನುವಾದ4 ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.