Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:5
28 ತಿಳಿವುಗಳ ಹೋಲಿಕೆ  

ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”


“ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.


ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.


ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.


ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.


ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು