Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:6
10 ತಿಳಿವುಗಳ ಹೋಲಿಕೆ  

ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.


ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.


ನನ್ನ ಪ್ರಾರ್ಥನೆಯು ನಿಮ್ಮ ಮುಂದೆ ಬರಲಿ. ನನ್ನ ಮೊರೆಗೆ ನಿಮ್ಮ ಕಿವಿಕೊಡಿರಿ.


ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು.


ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು