Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:13
18 ತಿಳಿವುಗಳ ಹೋಲಿಕೆ  

ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.


ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.


ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.


ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.


ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು