ಕೀರ್ತನೆಗಳು 18:25 - ಕನ್ನಡ ಸಮಕಾಲಿಕ ಅನುವಾದ25 ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕರುಣೆಯುಳ್ಳವನಿಗಾತ ಕರುಣಾಮಯಿ I ದೋಷರಹಿತನಿಗಾತ ನಿರ್ದೋಷಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.