Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:26 - ಕನ್ನಡ ಸಮಕಾಲಿಕ ಅನುವಾದ

26 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೋ ಶತ್ರುವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:26
9 ತಿಳಿವುಗಳ ಹೋಲಿಕೆ  

ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು