Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:31 - ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:31
10 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.


ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,


“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು