Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:32 - ಕನ್ನಡ ಸಮಕಾಲಿಕ ಅನುವಾದ

32 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:32
8 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


“ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು.


ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು