Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:37 - ಕನ್ನಡ ಸಮಕಾಲಿಕ ಅನುವಾದ

37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹಿಡಿದುಕೊಳ್ವೆನು ಶತ್ರುಗಳನು ಬೆನ್ನಟ್ಟಿ I ಅವರನು ನಿರ್ಮೂಲ ಮಾಡದೆ ಬರೆನು ಹಿಂತಿರುಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:37
14 ತಿಳಿವುಗಳ ಹೋಲಿಕೆ  

ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.


ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.


ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ.


ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.


ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.


ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು