Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:4 - ಕನ್ನಡ ಸಮಕಾಲಿಕ ಅನುವಾದ

4 ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:4
18 ತಿಳಿವುಗಳ ಹೋಲಿಕೆ  

ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು