Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:43 - ಕನ್ನಡ ಸಮಕಾಲಿಕ ಅನುವಾದ

43 ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:43
21 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.


ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು