Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:45 - ಕನ್ನಡ ಸಮಕಾಲಿಕ ಅನುವಾದ

45 ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಎದೆಗುಂದಿದವರಾದರು ಆ ವಿದೇಶಿಯರು I ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:45
9 ತಿಳಿವುಗಳ ಹೋಲಿಕೆ  

ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.


ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು