Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:5 - ಕನ್ನಡ ಸಮಕಾಲಿಕ ಅನುವಾದ

5 ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆವರಿಸಿಕೊಂಡವು ಪಾತಾಳ ಪಾಶಗಳು I ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:5
8 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.


ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು