ಕೀರ್ತನೆಗಳು 19:13 - ಕನ್ನಡ ಸಮಕಾಲಿಕ ಅನುವಾದ13 ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.