Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:8
44 ತಿಳಿವುಗಳ ಹೋಲಿಕೆ  

ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.


ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.


ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.


ಕಷ್ಟಸಂಕಟಗಳು ನನ್ನನ್ನು ಹಿಡಿದಿವೆ, ಆದರೂ ನಿಮ್ಮ ಆಜ್ಞೆಗಳು ನನಗೆ ಆನಂದದಾಯಕವಾಗಿವೆ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ನಾನು ನೀತಿನ್ಯಾಯವನ್ನು ನಡೆಸಿದ್ದೇನೆ; ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಬೇಡಿರಿ.


ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.


ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.


ಅವರಿಗೆ ಏನಾದರೂ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ,” ಎಂದನು.


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?


ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ.


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.


ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.


ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು