Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:11 - ಕನ್ನಡ ಸಮಕಾಲಿಕ ಅನುವಾದ

11 ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:11
9 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು