ಕೀರ್ತನೆಗಳು 2:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ! ಅಧ್ಯಾಯವನ್ನು ನೋಡಿ |