Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:3 - ಕನ್ನಡ ಸಮಕಾಲಿಕ ಅನುವಾದ

3 “ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I “ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತು ಬೇಡಿಗಳನ್ನು ಮುರಿದು ಬೀಸಾಡೋಣ ಎಂದು ಮಾತಾಡಿಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:3
5 ತಿಳಿವುಗಳ ಹೋಲಿಕೆ  

ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು