ಕೀರ್ತನೆಗಳು 20:8 - ಕನ್ನಡ ಸಮಕಾಲಿಕ ಅನುವಾದ8 ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು! ಅಧ್ಯಾಯವನ್ನು ನೋಡಿ |
ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.