Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:10 - ಕನ್ನಡ ಸಮಕಾಲಿಕ ಅನುವಾದ

10 ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಅವರನ್ನು ಸಂಹರಿಸಿ ಭೂವಿುಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:10
8 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.


ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು