Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:13
16 ತಿಳಿವುಗಳ ಹೋಲಿಕೆ  

ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು