Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:8 - ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:8
17 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ,


ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,


ಇದಲ್ಲದೆ ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು. ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.


ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು