Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:2 - ಕನ್ನಡ ಸಮಕಾಲಿಕ ಅನುವಾದ

2 ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಹಸುರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:2
11 ತಿಳಿವುಗಳ ಹೋಲಿಕೆ  

ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು