Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:6 - ಕನ್ನಡ ಸಮಕಾಲಿಕ ಅನುವಾದ

6 ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:6
12 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು