Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:1 - ಕನ್ನಡ ಸಮಕಾಲಿಕ ಅನುವಾದ

1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:1
18 ತಿಳಿವುಗಳ ಹೋಲಿಕೆ  

ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.


ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.


ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.


ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.


ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.


ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.


ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.


ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.


ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.


ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?


ಅದು ಅನೇಕ ಸಾರಿ ಕರುಣೆಗಾಗಿ ನಿನಗೆ ವಿಜ್ಞಾಪನೆಮಾಡಿತೇ? ನಿನ್ನ ಸಂಗಡ ನಮ್ರತೆಯಿಂದ ಮಾತನಾಡೀತೇ?


ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು