Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:10 - ಕನ್ನಡ ಸಮಕಾಲಿಕ ಅನುವಾದ

10 ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಹಾಪ್ರಭಾವವುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ; ಮಹಾಪ್ರಭಾವವುಳ್ಳ ಅರಸನು ಈತನೇ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:10
11 ತಿಳಿವುಗಳ ಹೋಲಿಕೆ  

ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು