ಕೀರ್ತನೆಗಳು 24:8 - ಕನ್ನಡ ಸಮಕಾಲಿಕ ಅನುವಾದ8 ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಹಾಪ್ರಭಾವವುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ ವಿಶೇಷ ಪರಾಕ್ರವಿುಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು. ಅಧ್ಯಾಯವನ್ನು ನೋಡಿ |