Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:15 - ಕನ್ನಡ ಸಮಕಾಲಿಕ ಅನುವಾದ

15 ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ; ಏಕೆಂದರೆ ಅವರೇ ನನ್ನ ಪಾದಗಳನ್ನು ಬಲೆಯಿಂದ ಬಿಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಿರುಗಿದೆ ಎನ್ನ ನಯನ ಪ್ರಭುವಿನತ್ತ I ಉರುಲಿಂದ ಕಾಲನು ಕಳಚಿದನಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:15
9 ತಿಳಿವುಗಳ ಹೋಲಿಕೆ  

ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.


ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.


ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು