Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:16 - ಕನ್ನಡ ಸಮಕಾಲಿಕ ಅನುವಾದ

16 ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಒಬ್ಬೊಂಟಿಗನೂ ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆತೋರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:16
12 ತಿಳಿವುಗಳ ಹೋಲಿಕೆ  

ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


“ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.


ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ಯೆಹೋವ ದೇವರೇ, ನನಗೆ ಉತ್ತರಕೊಡಿರಿ. ನಾನು ದೀನನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ.


ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.


ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು