Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:5
36 ತಿಳಿವುಗಳ ಹೋಲಿಕೆ  

ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.


ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.


ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ. ನಿಮಗೆ ದಿನವೆಲ್ಲಾ ಮೊರೆಯಿಡುತ್ತೇನೆ.


ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.


ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ.


ಯೆಹೋವ ದೇವರೇ, ನಿಮ್ಮ ತೀರ್ಪುಗಳ ವಿವರವನ್ನು ನನಗೆ ಬೋಧಿಸಿರಿ; ಆಗ ನಾನು ಅವುಗಳನ್ನು ಅಂತ್ಯದವರೆಗೂ ಹಿಂಬಾಲಿಸುವೆನು.


ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?


ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ.


ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು