Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:12 - ಕನ್ನಡ ಸಮಕಾಲಿಕ ಅನುವಾದ

12 ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಪಾದವು ಸಮಭೂವಿುಯಲ್ಲಿ ನಿಂತಿದೆ; ಕೂಡಿದ ಸಭೆಗಳಲ್ಲಿ ಯೆಹೋವನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:12
11 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.


ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.


ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.


ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”


ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.


ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ, ಹಿರಿಯರ ಸಭೆಯಲ್ಲಿ ದೇವರನ್ನು ಸ್ತುತಿಸಲಿ.


ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.


ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು