ಕೀರ್ತನೆಗಳು 27:5 - ಕನ್ನಡ ಸಮಕಾಲಿಕ ಅನುವಾದ5 ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು. ಅಧ್ಯಾಯವನ್ನು ನೋಡಿ |