Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:6 - ಕನ್ನಡ ಸಮಕಾಲಿಕ ಅನುವಾದ

6 ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:6
38 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.


ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ.


ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.


ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ.


ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!


“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.


ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.


ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.


ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು