Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:7
36 ತಿಳಿವುಗಳ ಹೋಲಿಕೆ  

ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.


ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.


ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು.


ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.


ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.


ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.


ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?


ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು