Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:9 - ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:9
24 ತಿಳಿವುಗಳ ಹೋಲಿಕೆ  

ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”


ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.


ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು