Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಗರ್ಜನೆಗೆ ಗರ್ಭದ ಜಿಂಕೆಗಳು ಈಯುತ್ತವೆ; ಕಾಡಿನ ಮರಗಳು ಬರೀದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು - ಎಷ್ಟೋ ಪ್ರಭಾವ! ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ; ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:9
10 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.


ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು