Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆಲಿಸು ಪ್ರಭು, ಕರುಣಿಸು, ನೆರವಾಗು ಬೇಗ” I ಎಂದು ಪ್ರಭು ನಾನಿನ್ನನು ಪ್ರಾರ್ಥಿಸಿದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು! ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:10
7 ತಿಳಿವುಗಳ ಹೋಲಿಕೆ  

ನಿಜವಾಗಿಯೂ ದೇವರು ನನ್ನ ಸಹಾಯಕರು. ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು.


ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.


ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು