ಕೀರ್ತನೆಗಳು 30:11 - ಕನ್ನಡ ಸಮಕಾಲಿಕ ಅನುವಾದ11 ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.