Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:6 - ಕನ್ನಡ ಸಮಕಾಲಿಕ ಅನುವಾದ

6 ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:6
13 ತಿಳಿವುಗಳ ಹೋಲಿಕೆ  

“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.


ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.


ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು