Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:2
7 ತಿಳಿವುಗಳ ಹೋಲಿಕೆ  

ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.


ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು