Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:14 - ಕನ್ನಡ ಸಮಕಾಲಿಕ ಅನುವಾದ

14 ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:14
13 ತಿಳಿವುಗಳ ಹೋಲಿಕೆ  

ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು