Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:12 - ಕನ್ನಡ ಸಮಕಾಲಿಕ ಅನುವಾದ

12 ನನ್ನ ಉಪಕಾರಕ್ಕೆ ಬದಲಾಗಿ ನನಗೆ ಕೇಡನ್ನು ಮಾಡಿ ನನ್ನನ್ನು ದುಃಖದಲ್ಲಿರುವವರಂತೆ ಬಿಟ್ಟುಬಿಟ್ಟಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:12
14 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.


ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.


ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.


ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.


ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು