ಕೀರ್ತನೆಗಳು 35:25 - ಕನ್ನಡ ಸಮಕಾಲಿಕ ಅನುವಾದ25 ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ನುಂಗಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ. ಅಧ್ಯಾಯವನ್ನು ನೋಡಿ |